Breaking News

ಸಾಲದ ವಿಚಾರಕ್ಕೆ ಪತಿ-ಪತ್ನಿ ಕಲಹ : ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕಲಬುರಗಿ: ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ನಡೆದ ಕಲಹ ದುರಂತಕ್ಕೆ ಕಾರಣವಾಗಿದ್ದು, ತಾಯಿ ತನ್ನ ಇಬ್ಬರು ಪುತ್ರಿಯರೊಂದಿಗೆ ಬಾವಿಗೆ ಹಾರಿದ ಘಟನೆ ಆಳಂದ ತಾಲೂಕಿನ ಇಕ್ಕಳಕಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಗೌರಮ್ಮ (52) ಹಾಗೂ ಪುತ್ರಿ ಭಾಗ್ಯಶ್ರೀ (25) ಮೃತಪಟ್ಟಿದ್ದಾರೆ. ಮತ್ತೊಬ್ಬ ಪುತ್ರಿ ಅಂಬಿಕಾ (21) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲದ ವಿಚಾರವಾಗಿ ಗೌರಮ್ಮ ಹಾಗೂ ಪತಿ ಪೀರಪ್ಪ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಗೌರಮ್ಮ ಇಬ್ಬರು ಪುತ್ರಿಯರೊಂದಿಗೆ ಬಾವಿಗೆ ಹಾರಿದ್ದಾರೆ. ಈ ಕುರಿತು ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಿಡ್ಲಘಟ್ಟ: ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ …

Leave a Reply

Your email address will not be published. Required fields are marked *