Breaking News

ಕಾಲೇಜು ವಿದ್ಯಾರ್ಥಿಗಳ ನಡುವಿನ ಮಾರಾಮಾರಿ : ಯುವಕ ಸಾವು

ಬೆಂಗಳೂರು: ನಾಗರಬಾವಿ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಕ್ಷುಲ್ಲಕ ಗಲಾಟೆ ಭೀಕರ ಅಂತ್ಯ ಕಂಡಿದ್ದು, ಬಿಕಾಂ ವಿದ್ಯಾರ್ಥಿ ಯೋಗೇಶ್‌ ಮೃತಪಟ್ಟಿದ್ದಾರೆ. ಖಾಸಗಿ ಕಾಲೇಜು ಸಮೀಪ ನಡೆದ ವಾಗ್ವಾದ ಮಾರಾಮಾರಿಗೆ ತಿರುಗಿದ್ದು, ಯೋಗೇಶ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಯೋಗೇಶ್‌ ಅವರನ್ನು ಸ್ನೇಹಿತರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆಗೆ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಿಡ್ಲಘಟ್ಟ: ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ …

Leave a Reply

Your email address will not be published. Required fields are marked *