ಬೆಂಗಳೂರು: ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಒಬ್ಬ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ನಾಗದೇವನಹಳ್ಳಿ ನಿವಾಸಿ, ಬಿ.ಕಾಂ ವಿದ್ಯಾರ್ಥಿ ಯೋಗೇಶ್ (20) ಕೊಲೆಯಾದವರು. ನಾಗರಬಾವಿ 2ನೇ ಹಂತದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿ ಭುವನ್ ಕರೆ ಮಾಡಿ ಯೋಗೇಶ್‌ನನ್ನು ಸ್ಥಳಕ್ಕೆ ಬರುವಂತೆ ಹೇಳಿದ್ದು, ಯೋಗೇಶ್ ಸ್ನೇಹಿತ ಪ್ರಜ್ವಲ್ ಜೊತೆ ಅಲ್ಲಿಗೆ ತೆರಳಿದ್ದ. ಈ ವೇಳೆ ಭುವನ್ ನಾಲ್ಕೈದು ಯುವಕರೊಂದಿಗೆ ಬಂದಿದ್ದು, ಮಾತಿನ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಯುವಕನೊಬ್ಬ ಯೋಗೇಶ್ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಯೋಗೇಶ್‌ನನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸ್ನೇಹಿತರ ದೂರಿನ ಆಧಾರದ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

