ರಾಮನಗರ: ಅಜ್ಜನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅವಧಿ ಮೀರಿದ ಔಷಧಿಗಳ ರಾಶಿ ಪತ್ತೆಯಾಗಿದೆ. ಅಪರಿಚಿತರು ರಸ್ತೆ ಬದಿ ಹಾಗೂ ಬಂಡೆಗಳ ಮೇಲೆ ಔಷಧಿಗಳನ್ನು ಎಸೆದು ಹೋಗಿದ್ದು, ಸ್ಥಳೀಯರು ಆರೋಗ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಔಷಧಿಗಳ ಬ್ಯಾಚ್ ನಂಬರ್, ತಯಾರಿಕೆ ದಿನಾಂಕ ಮತ್ತು ಬಳಕೆ ಅವಧಿ ಪರಿಶೀಲಿಸಿದರು. ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಬಳಸುವ ಔಷಧಿಗಳು ಪತ್ತೆಯಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಔಷಧಿಗಳೂ ಇರುವುದು ಕಂಡುಬಂದಿದೆ. ಔಷಧಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ಕಾಡಿನಲ್ಲಿ ಎಸೆದಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ಔಷಧಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಜಿಲ್ಲಾ ಆರೋಗ್ಯಾಧಿಕಾರಿಗೆ ವರದಿ ಸಲ್ಲಿಸಿ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ರಾಮಚಂದ್ರ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

