ಕೊಪ್ಪಳ: ಗಂಗಾವತಿ ಬಸ್ ನಿಲ್ದಾಣದಲ್ಲಿ ಯುವತಿಯರು ಹಾಗೂ ವಿದ್ಯಾರ್ಥಿನಿಯರ ಫೋಟೋಗಳನ್ನು ಅನುಮತಿಯಿಲ್ಲದೆ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಆರೋಪಿತ ವ್ಯಕ್ತಿ ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿ ಎನ್ನಲಾಗಿದೆ. ಯುವತಿಯರ ಫೋಟೋ ತೆಗೆಯುತ್ತಿದ್ದುದನ್ನು ಗಮನಿಸಿದ ಮಹಿಳೆಯರು ಆತನನ್ನು ಪ್ರಶ್ನಿಸಿದ್ದು, ಬಳಿಕ ಸಾರ್ವಜನಿಕರೂ ಸ್ಥಳದಲ್ಲಿ ಜಮಾಯಿಸಿದ್ದಾರೆ. ಈ ವೇಳೆ ಕೆಲವರು ಆತನಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಮೊಬೈಲ್ ಪರಿಶೀಲಿಸಿದಾಗ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಹಲವು ಫೋಟೋಗಳು ಪತ್ತೆಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೊಬೈಲ್‌ನಲ್ಲಿ ಆಕ್ಷೇಪಾರ್ಹ ಚಿತ್ರಗಳೂ ಇದ್ದವು ಎಂದು ಸ್ಥಳೀಯರು ಆರೋಪಿಸಿದ್ದು, ವ್ಯಕ್ತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹಾಗೂ ಆರೋಪಗಳ ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

