ಬೀದರ್: ಭಾಲ್ಕಿ ಪಟ್ಟಣದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಸುದರ್ಶನ ರಟಕಲ್ ಎಂಬ ಯುವಕನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ನಗರ ಪೊಲೀಸರು ಭಾಗ್ಯವಾನ್, ವಿಠಲ್, ಸಚಿನ್, ಸಾಯಿ ಕಾಂಬ್ಳೆ ಹಾಗೂ ಆದಿತ್ಯ ಕಾಂಬ್ಳೆ ಎಂಬ ಐವರನ್ನು ಬಂಧಿಸಿದ್ದಾರೆ. ಮಾಸುಮಪಾಶಾ ಕಾಲೋನಿಯಿಂದ ಸುದರ್ಶನನನ್ನು ಅಪಹರಿಸಿದ್ದ ಆರೋಪಿಗಳು, ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ ಮೃತದೇಹವನ್ನು ಕಡ್ಯಾಳ ಗ್ರಾಮದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಎಸೆದು ಪರಾರಿಯಾಗಿದ್ದರು. ಮಾಹಿತಿ ತಿಳಿದು ರೈಲ್ವೆ ಹಾಗೂ ಭಾಲ್ಕಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವಕನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಭಾಲ್ಕಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೊಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

