ಬೀದರ್: ಭಾಲ್ಕಿಯಲ್ಲಿ 21 ವರ್ಷದ ಸುದರ್ಶನ ರತ್ಕಲೆ ಎಂಬ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಯುವತಿಯ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದ್ದೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಸುದರ್ಶನ ಕುಟುಂಬಸ್ಥರು ಇದನ್ನು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಸುದರ್ಶನ ತಾಯಿ ಲಕ್ಷ್ಮೀ, ತನ್ನ ಮಗನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ತನಿಖೆಗೆ ಒತ್ತಾಯಿಸಿದ್ದಾರೆ. ರೈಲ್ವೆ ಪೊಲೀಸರು ಪ್ರಾಥಮಿಕವಾಗಿ ಇದನ್ನು ಆತ್ಮಹತ್ಯೆ ಎಂದು ಹೇಳಿದ್ದರೂ, ಕುಟುಂಬಸ್ಥರ ದೂರಿನ ಆಧಾರದ ಮೇಲೆ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

