Breaking News

ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಚಾಕು ಇರಿದು ಬಿಕಾಂ ವಿದ್ಯಾರ್ಥಿಯ ಹತ್ಯೆ!

ಬೆಂಗಳೂರು: ನಾಗರಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಬಿಕಾಂ ವಿದ್ಯಾರ್ಥಿ ಯೋಗೇಶ್ (19) ಕೊಲೆಯಾಗಿದ್ದಾನೆ. ಕಾಲೇಜಿನ ಹಿಂಭಾಗದ ಜಿಮ್ ಬಳಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಈ ವೇಳೆ ಯೋಗೇಶ್‌ನ ಎದೆಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಯೋಗೇಶ್‌ನನ್ನು ಸ್ನೇಹಿತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿಯಂತೆ ಕೊಲೆ ಆರೋಪಿಗಳು ಕಾಲೇಜಿನ ವಿದ್ಯಾರ್ಥಿಗಳಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ನಾಲ್ಕೈದು ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು, ಗಲಾಟೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರು: ವೃದ್ಧೆಗೆ ನಿದ್ದೆ ಮಾತ್ರೆ ಬೆರೆಸಿದ ಟೀ ಕುಡಿಸಿ ಚಿನ್ನಾಭರಣ ಕಳವು

ಬೆಂಗಳೂರು: ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವೃದ್ಧೆಯನ್ನು ಸಲುಗೆಯಿಂದ ಮಾತನಾಡಿಸಿ, ನಿದ್ದೆ ಮಾತ್ರೆ ಬೆರೆಸಿದ ಟೀ …

Leave a Reply

Your email address will not be published. Required fields are marked *