Breaking News

ಚನ್ನಗಿರಿ | ಅತ್ಯಾಚಾರಿ ಬಂಧಿಸದ ಪೊಲೀಸರು: ಮನನೊಂದು ವ್ಯಕ್ತಿ ಆತ್ಮಹತ್ಯೆ

ಚನ್ನಗಿರಿ: ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಿಲ್ಲ ಎಂದು ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಗಿರಿ ತಾಲ್ಲೂಕಿನಲ್ಲಿ ನಡೆದಿದೆ. ಆಗಸ್ಟ್‌ 22ರಂದು ಮಗಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆದರೆ ಒಂದೂವರೆ ತಿಂಗಳಾದರೂ ಆರೋಪಿ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ತಂದೆ ಗುರುವಾರ ತೋಟದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಚನ್ನಗಿರಿ ಪೊಲೀಸ್ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನಾಕಾರರನ್ನು ಇನ್‌ಸ್ಪೆಕ್ಟರ್‌ ಕೆ.ಎನ್. ರವೀಶ್ ಸಮಾಧಾನಪಡಿಸಿದರು. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ವಿಶೇಷ ತಂಡ ರಚಿಸಿ ಹುಡುಕಾಟ ನಡೆಸಲಾಗುತ್ತಿದೆ. ಪೊಲೀಸ್ ಇಲಾಖೆ ಯಾವುದೇ ನಿರ್ಲಕ್ಷ್ಯ ವಹಿಸಿಲ್ಲ, ಸುಳಿವು ಸಿಕ್ಕ ಕೂಡಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶವಾಗಿ ಒಂದೇ ತಿಂಗಳಿಗೆ ಹೊಸ ಮನೆಗೆ ಕನ್ನ! ದಂಪತಿಗೆ ಲಾಂಗ್‌, ಮಚ್ಚು ತೋರಿಸಿ ದರೋಡೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಪುರ ಗ್ರಾಮದಲ್ಲಿ ಗೃಹಪ್ರವೇಶವಾಗಿ ಒಂದು ತಿಂಗಳಷ್ಟೇ ಕಳೆದಿದ್ದ ನೂತನ ಮನೆಗೆ ನುಗ್ಗಿದ ಮೂವರು …

Leave a Reply

Your email address will not be published. Required fields are marked *