ಉಡುಪಿ: ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸೆ.29ರಂದು ನಡೆದ ಕೃತ್ಯದ ಸಿಸಿ ಕ್ಯಾಮೆರಾ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳೀಯರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡು, ಕುಂದಾಪುರ ತಾಲ್ಲೂಕಿನ ಗುಲ್ವಾಡಿ ಗ್ರಾಮದ ಮೊಹಮ್ಮದ್ ಸಿನಾನ್ (20) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಶಂಕೆಯಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ. ಇದೇ ಆರೋಪಿ ಕುಂದಾಪುರ ಉಪವಿಭಾಗದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಐದು ದನ ಕಳ್ಳತನ ಪ್ರಕರಣಗಳಲ್ಲೂ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
