ಬೆಳಗಾವಿ: ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಹಳಿಯಾಳದಿಂದ ಬೆಳಗಾವಿಗೆ ಬರುತ್ತಿದ್ದ ಬಸ್‌ನಲ್ಲಿ ದಾರಿ ಬಿಡುವ ವಿಚಾರಕ್ಕೆ ಮಹಿಳೆ ಹಾಗೂ ಸಹಪ್ರಯಾಣಿಕನ ನಡುವೆ ಜಗಳ ಆರಂಭವಾಗಿತ್ತು. ಬಸ್‌ನಿಂದ ಇಳಿದ ಬಳಿಕವೂ ಜಗಳ ಮುಂದುವರಿದಿದ್ದು, ಆರೋಪಿ ಚಪ್ಪಲಿ ತೆಗೆದು ಮಹಿಳೆಯ ಮುಖ ಹಾಗೂ ದೇಹಕ್ಕೆ ಹಲ್ಲೆ ನಡೆಸಿ, ಕಾಲಿನಿಂದ ಒದ್ದಿದ್ದಾನೆ. ಜನನಿಬಿಡ ಪ್ರದೇಶದಲ್ಲಿ ನಡೆದ ಘಟನೆಯ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮಾರ್ಕೆಟ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

