ಬೆಂಗಳೂರು: ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಚಾಮರಾಜಪೇಟೆ ಪೊಲೀಸರು ಭೇದಿಸಿದ್ದಾರೆ. ಏಳು ಮಂದಿಯನ್ನು ಬಂಧಿಸಿ ₹21.68 ಲಕ್ಷ ಮೌಲ್ಯದ 4,337 ನಕಲಿ ₹500 ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ರಸ್ತೆ ಫ್ಲೈಓವರ್ ಬಳಿ ಕಾರಿನಲ್ಲಿ ನಕಲಿ ನೋಟುಗಳಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಜಾಲದ ಮಾಹಿತಿ ಸಿಕ್ಕಿದೆ. ತಮಿಳುನಾಡು ಹಾಗೂ ತೆಲಂಗಾಣದಲ್ಲಿ ದಾಳಿ ನಡೆಸಿ 17 ಪ್ರಿಂಟಿಂಗ್ ಯಂತ್ರಗಳು ಮತ್ತು ಹೆಚ್ಚುವರಿ ₹6 ಲಕ್ಷ ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಸತ್ಯಂ, ಮುರುಗೇಶ್, ಗೋವಿಂದನ್, ಬರ್ಕತ್, ಸರವಣನ್, ಲಕ್ಷ್ಮಣ ಹಾಗೂ ಕೃಷ್ಣ ಬಂಧಿತರು. ಕಾರು, 8 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

