ಬೆಂಗಳೂರು, ಅ.3: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡ ಘಟನೆ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದಿದೆ. ಕರಿಲಿಂಗಪ್ಪ (40), ಲಕ್ಷ್ಮಮ್ಮ (42), ಚೈತ್ರಾ (11), ಬಸವ (9), ಗೀತಾ ಹಾಗೂ ಗಿರಿಜಾ (3) ಗಾಯಗೊಂಡವರು. ಗಾಯಾಳುಗಳೆಲ್ಲ ರಾಯಚೂರು ಮೂಲದವರಾಗಿದ್ದು, ಬೆಂಗಳೂರಿಗೆ ಬಂದು ವಿನಾಯಕ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ತಾಯಿ ಲಕ್ಷ್ಮಮ್ಮ ಹಾಗೂ 3 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
