ಬೆಂಗಳೂರು: ನಾಯಂಡಹಳ್ಳಿಯ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ನಲ್ಲಿ ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಎರಡೂ ಗುಂಪುಗಳು ಪರಸ್ಪರ ದೊಣ್ಣೆ ಹಾಗೂ ರಾಡ್‌ಗಳಿಂದ ಹಲ್ಲೆ ನಡೆಸಿದ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಮಹಡಿಯಲ್ಲಿ ಉತ್ತರ ಪ್ರದೇಶದವರು ಹಾಗೂ ನೆಲಮಹಡಿಯಲ್ಲಿ ಪಶ್ಚಿಮ ಬಂಗಾಳದ ಕಾರ್ಮಿಕರು ವಾಸಿಸುತ್ತಿದ್ದರು. ಗುರುವಾರ ನಡೆದ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಜಗಳದ ಸದ್ದು ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
