Breaking News

ಬೀದರ್ ನಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಶಂಕಿತ ಯುವಕ ಅರೆಸ್ಟ್

ಬೀದರ್: ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಗಡಿ ಜಿಲ್ಲೆ ಬೀದರ್‌ನಲ್ಲೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಭಾಲ್ಕಿ ತಾಲೂಕಿನ ಏಣಕೂರು ಗ್ರಾಮದ ವಿಶಾಲಕುಮಾರ್ ಮೇತ್ರೆ ಎಂಬಾತನನ್ನು ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಶಾಲಕುಮಾರ್ ಮೊಬೈಲ್ ಪರಿಶೀಲನೆ ವೇಳೆ ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ವಾಟ್ಸಾಪ್ ಮೂಲಕ ಸಂಪರ್ಕ ಹೊಂದಿದ್ದ ಎನ್ನಲಾದ ಮಾಹಿತಿ ಪತ್ತೆಯಾಗಿದೆ. ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆದರೆ ವಿಶಾಲಕುಮಾರ್ ಕುಟುಂಬಸ್ಥರು ಆರೋಪಗಳನ್ನು ತಳ್ಳಿಹಾಕಿದ್ದು, ಆಸ್ತಿ ಹಂಚಿಕೆ ವಿಚಾರದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಆತನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಪೊಲೀಸರು ಎರಡು ದಿನಗಳ ಹಿಂದೆ ಮನೆಗೆ ಬಂದು ಪರಿಶೀಲನೆ ನಡೆಸಿ ಆತನನ್ನು ಕರೆದೊಯ್ದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Share News

About BigTv News

Check Also

ರಾಜ್ಯದ ಬುಡಕಟ್ಟು ಸಮುದಾಯದ 95 ಜನರಿಗೆ ವಿದೇಶದಲ್ಲಿ ವ್ಯಾಪಾರದ ಆಸೆ ತೋರಿಸಿ ವಂಚನೆ!

ಶಿವಮೊಗ್ಗ : ವಿದೇಶದಲ್ಲಿ ವ್ಯಾಪಾರದ ಅವಕಾಶವಿದೆ ಎಂದು ನಂಬಿಸಿ ಏಜೆಂಟರು ಕಳುಹಿಸಿದ್ದ ಕರ್ನಾಟಕದ 95 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದವರು ಆಫ್ರಿಕಾದ …

Leave a Reply

Your email address will not be published. Required fields are marked *