Breaking News

ಅಡುಗೆ ರುಚಿಯಾಗಿಲ್ಲವೆಂದು ಕಿರಿಕ್, ಪೇಂಟರ್ ಕೈಯಿಂದಲೇ ಕಾರ್ಪೆಂಟರ್ ಭೀಕರ ಕೊಲೆ!

ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚೇನಹಳ್ಳಿಯಲ್ಲಿ ಅಡುಗೆ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾರ್ಪೆಂಟರ್‌ವೊಬ್ಬರನ್ನು ಪೇಂಟರ್ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗೋರಖ್‌ಪುರ ಮೂಲದ ಅಮಿತ್ ಕುಮಾರ್ (22) ಮೃತ ಕಾರ್ಪೆಂಟರ್. ಆರೋಪಿ ಪೇಂಟರ್ ಸುನಿಲ್ ಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮೂವರು ಕಾರ್ಪೆಂಟರ್‌ಗಳು ಹಾಗೂ ಸುನಿಲ್ ಕುಮಾರ್ ವಾಸವಾಗಿದ್ದರು. ಮದ್ಯ ಸೇವಿಸಿ ಬಂದಿದ್ದ ಸುನಿಲ್, ಅಡುಗೆ ಸರಿಯಾಗಿ ಮಾಡಿಲ್ಲ ಎಂದು ಅಮಿತ್ ಜೊತೆ ಜಗಳ ತೆಗೆದುಕೊಂಡಿದ್ದಾನೆ. ಮಾತಿಗೆ ಮಾತು ಬೆಳೆದು ಗಲಾಟೆ ತೀವ್ರಗೊಂಡಾಗ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಅಮಿತ್ ಹೊಟ್ಟೆಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಅಮಿತ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಆರ್.ಆರ್. ನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬ್ರಹ್ಮಾವರ: ಮನೆಗೆ ನುಗ್ಗಿ ಸೊತ್ತು ಕಳವು

ಬ್ರಹ್ಮಾವರ: ಹನೇಹಳ್ಳಿ ಗ್ರಾಮದ ಚಾಂಪಾಡಿಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ₹30 ಸಾವಿರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. …

Leave a Reply

Your email address will not be published. Required fields are marked *