ಶಿವಮೊಗ್ಗ: ಗಾಂಜಾ ಅಮಲಿನಲ್ಲಿದ್ದ ನಾಲ್ವರು ಯುವಕರು ₹500 ಹಣಕ್ಕಾಗಿ ಕೂಲಿ ಕಾರ್ಮಿಕನನ್ನು ಡ್ರ್ಯಾಗನ್‌ನಿಂದ ಇರಿದು ಹತ್ಯೆ ಮಾಡಿರುವ ಘಟನೆ ಅಶೋಕನಗರದ ತುಂಗಾ ಚಾನೆಲ್ ಬಳಿ ನಡೆದಿದೆ. ಮಹ್ಮದ್ ಅಲಿ ಮೃತರು. ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಯುವಕರು ಹಣಕ್ಕಾಗಿ ಆತನನ್ನು ಪೀಡಿಸಿದ್ದು, ಹಣ ನೀಡಲು ನಿರಾಕರಿಸಿದಾಗ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಡ್ರ್ಯಾಗನ್‌ನಿಂದ ಮಹ್ಮದ್ ಅಲಿಗೆ ಇರಿದು, ಅವರ ಬಳಿಯಿದ್ದ ₹500 ಕಸಿದುಕೊಂಡು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ರಸ್ತೆ ಬದಿಯಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಾಂಜಾ ಅಮಲಿನಲ್ಲಿ ಯುವಕರು ಮಾರಕಾಸ್ತ್ರ ಹಿಡಿದು ಹಣಕ್ಕಾಗಿ ಹಿಂಸಾಚಾರ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಆತಂಕ ಮೂಡಿಸಿದೆ. ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾವಳಿಗೆ ಕಡಿವಾಣ ಹಾಕಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
