Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಮನೆ ಮೇಲೆ ಕಲ್ಲು ತೂರಾಟ: ಸಂತ್ರಸ್ತೆ ಕುಟುಂಬದವರ ಆಕ್ರೋಶ

ದಾವಣಗೆರೆ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಕುಟುಂಬದವರು ಆರೋಪಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಚನ್ನಗಿರಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿ, ಸಂತ್ರಸ್ತೆಯ ತಂದೆ ಆತ್ಮಹತ್ಯೆ ಮಾಡಿಕೊಂಡ ಬಳಿಕ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಇದೀಗ ಆರೋಪಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಕುಟುಂಬಸ್ಥರನ್ನು ತಡೆದಿದ್ದಾರೆ. ಕಿಟಕಿ ಗಾಜು ಒಡೆದಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಗೆ 20 ವರ್ಷ ವಯಸ್ಸಾಗಿದ್ದು, ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಿದೆ ಎಂದು ಚನ್ನಗಿರಿ ಇನ್ಸ್‌ಪೆಕ್ಟರ್ ರವೀಶ್ ತಿಳಿಸಿದ್ದಾರೆ.

Share News

About BigTv News

Check Also

ಬ್ರಹ್ಮಾವರ: ಮನೆಗೆ ನುಗ್ಗಿ ಸೊತ್ತು ಕಳವು

ಬ್ರಹ್ಮಾವರ: ಹನೇಹಳ್ಳಿ ಗ್ರಾಮದ ಚಾಂಪಾಡಿಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ₹30 ಸಾವಿರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. …

Leave a Reply

Your email address will not be published. Required fields are marked *