Breaking News

ನಕಲಿ ಕ್ಯೂಆರ್ ಕೋಡ್ ಮೂಲಕ 12 ಲಕ್ಷ ರೂ. ವಂಚನೆ: 6 ಜನ ಅರೆಸ್ಟ್

ಉಡುಪಿ: ಮಣಿಪಾಲದ ಎಂಐಟಿ ಕ್ಯಾಂಪಸ್‌ನಲ್ಲಿ ಪ್ರಯಾಣಿಕರಿಂದ ಸಂಗ್ರಹಿಸುತ್ತಿದ್ದ ಹಣವನ್ನು ನಕಲಿ ಕ್ಯೂಆರ್ ಕೋಡ್ ಮೂಲಕ ಬೇರೆ ಖಾತೆಗೆ ವರ್ಗಾಯಿಸಿ ಸುಮಾರು ₹12 ಲಕ್ಷ ವಂಚಿಸಿದ ಆರೋಪದ ಮೇಲೆ ಆರು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಎಂಐಟಿ ಕ್ಯಾಂಪಸ್‌ನಲ್ಲಿ ಬ್ಯಾಟರಿ ಚಾಲಿತ ವಾಹನ ಸೇವೆ ನೀಡುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಕಂಪನಿಯ ಅಧಿಕೃತ ಕ್ಯೂಆರ್ ಕೋಡ್ ಬದಲಿಗೆ ವೈಯಕ್ತಿಕ ಮರ್ಚೆಂಟ್ ಕ್ಯೂಆರ್ ಕೋಡ್ ಬಳಸಿ ಪ್ರಯಾಣಿಕರಿಂದ ಹಣ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ಈ ಹಣವನ್ನು ಆರೋಪಿ ಮುತ್ತಣ್ಣ ಆಡಿನವರ ಅವರ ಪತ್ನಿ ಐಶ್ವರ್ಯ ಅವರ ಖಾತೆಗೆ ವರ್ಗಾಯಿಸಿ, ಬಳಿಕ ಪರಸ್ಪರ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿದ್ದಮೂರ್ತಿ ಜಿ., ಶಿವರಾಜ್ ನಾಯ್ಕ್, ಸುದೀಪ್, ಜಿತೇಶ್ ಎಲ್. ಕಾಂಚನ್, ಮುತ್ತಣ್ಣ ಆಡಿನವರ ಹಾಗೂ ಎಂ.ಬಿ. ಅವಿನಾಶ್ ಬಂಧಿತರು. ಅ.2ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *