ಲಿಂಗಸುಗೂರು: ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ಐವರ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಗಪ್ಪ ಅವರು ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಯಮನೂರು, ರಮೇಶ, ತಿಮ್ಮಣ್ಣ, ಬಸವರಾಜ ಹಾಗೂ ರವಿ ಎಂಬವರು ಜಾತಿ ಹೆಸರಿನಿಂದ ನಿಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ಬಿಡಿಸಲು ಬಂದ ಸಂಗಪ್ಪ ಅವರ ಅಣ್ಣ ಗದ್ದೆಪ್ಪ ಅವರ ಮೇಲೂ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಜಾತಿ ನಿಂದನೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

