Breaking News

ಬೆಳಂಬೆಳಗ್ಗೆ ಸಿಸಿಬಿ ಪೊಲೀಸರ ಖಡಕ್ ಆಪರೇಷನ್..! 3 ಕೆಜಿಗೂ ಅಧಿಕ ಗಾಂಜಾ ವಶ, ಇಬ್ಬರು ವಶಕ್ಕೆ ಪಡೆದಿದ್ದಾರೆ …

ಬೆಳಂಬೆಳಗ್ಗೆ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ..!

3 ಕೆಜಿಗೂ ಅಧಿಕ ಗಾಂಜಾ ವಶ.. ಇಬ್ಬರು ವಶಕ್ಕೆ ಎನ್ನಲಾಗಿದೆ..!

ಹುಬ್ಬಳ್ಳಿ: ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮತ್ತೆ ಖಡಕ್ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಂಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ, 3 ಕೆಜಿಗೂ ಅಧಿಕ ಗಾಂಜಾವನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ…

ಕಾರ್ಯಾಚರಣೆ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದ್ದು, ಗಾಂಜಾ ಎಲ್ಲಿಂದ ತರಲಾಗಿತ್ತು? ಯಾರಿಗೆ ಸಾಗಿಸಲಾಗುತ್ತಿತ್ತು? ಇದರ ಹಿಂದೆ ಮತ್ತಷ್ಟು ಮಂದಿ ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ…

ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ಈ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇಂತಹ ಕಾರ್ಯಾಚರಣೆಗಳು ಮುಂದುವರಿದರೆ ನಗರದಲ್ಲಿ ನಡೆಯುತ್ತಿರುವ ಅಕ್ರಮ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಬೀಳಲಿದೆ ಎಂಬ ನಿರೀಕ್ಷೆ ಮೂಡಿದೆ…

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ…

Share News

About Shaikh BigTv

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *