Breaking News

ಹಳೇ ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಗೆ ಸಿಸಿಬಿ ಬ್ರೇಕ್..! 3.213 ಕೆಜಿ ಗಾಂಜಾ ಸಹಿತ ಇಬ್ಬರು ಅರೆಸ್ಟ್; ₹1.60 ಲಕ್ಷ ಮೌಲ್ಯದ ಮಾಲು ವಶ..!

ಹಳೇ ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಗೆ ಸಿಸಿಬಿ ಬ್ರೇಕ್..! ಇಬ್ಬರು ಗಾಂಜಾ ಮಾರಾಟಗಾರರ ಬಂಧನ; ₹1.60 ಲಕ್ಷ ಮೌಲ್ಯದ ಮಾಲು ವಶ..!

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ….

ಹುಬ್ಬಳ್ಳಿ–ಧಾರವಾಡ ಬೈಪಾಸ್ ರಸ್ತೆಯ ಕಾರವಾರ ರಸ್ತೆ ಬ್ರಿಡ್ಜ್‌ನಿಂದ ತಿಮ್ಮಸಾಗರ ಕಡೆಗೆ ಹೋಗುವ ರಸ್ತೆಯ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯ ತಂಡ ದಾಳಿ ನಡೆಸಿದೆ…

ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಒಟ್ಟು ₹1,60,650 ಮೌಲ್ಯದ 3.213 ಕೆಜಿ ಗಾಂಜಾ, ಎರಡು ಮೊಬೈಲ್ ಫೋನ್‌ಗಳು, ₹1,500 ನಗದು ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ…

ಬಂಧಿತರನ್ನು ತೇಜಸ್ ರಾಮಗಿರಿ (26), ಬಾಣಗಿತಿ ಗುಡಿಹಾಳ ಕ್ರಾಸ್, ಕಲಘಟಗಿ ಹಾಗೂ ಜೋಸೆಫ್ ದಾಸ್ (26), ಆನಂದನಗರ, ಹಳೇ ಹುಬ್ಬಳ್ಳಿ ನಿವಾಸಿಗಳು ಎಂದು ಗುರುತಿಸಲಾಗಿದೆ…

ಗಾಂಜಾ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಲಾಗಿತ್ತು ಹಾಗೂ ಈ ಪ್ರಕರಣದ ಹಿಂದೆ ಮತ್ತಷ್ಟು ಮಂದಿ ಇದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ…

ಹಳೇ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ.

Share News

About Shaikh BigTv

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *