Breaking News

ಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಗಲಾಟೆ, ಪತಿಯಿಂದಲೇ ಪತ್ನಿಯ ಭೀಕರ ಕೊ*ಲೆ!

ಬೆಳಗಾವಿ: ಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಪತಿ-ಪತ್ನಿ ನಡುವೆ ನಡೆದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಭಾಗ ತಾಲೂಕಿನ ಮಾಡಲಗಿ ಗ್ರಾಮದಲ್ಲಿ ನಡೆದಿದೆ. ಕಲ್ಲವ್ವ ಮರಡಿ (55) ಕೊಲೆಯಾದ ಮಹಿಳೆಯಾಗಿದ್ದು, ಪತಿ ಸದಾಶಿವ ಮರಡಿ (67) ಆರೋಪಿಯಾಗಿದ್ದಾನೆ. ಜಾನುವಾರುಗಳಿಗೆ ಮೇವು ಹಾಕುವ ವಿಚಾರದಲ್ಲಿ ದಂಪತಿ ನಡುವೆ ಜಗಳ ನಡೆದಿತ್ತು. ಬಳಿಕ ಕಲ್ಲವ್ವ ಹಸಿರು ಮೇವು ತರಲು ಕಬ್ಬಿನ ಗದ್ದೆಗೆ ತೆರಳಿದ್ದರು. ಕೋಪಗೊಂಡಿದ್ದ ಸದಾಶಿವ ಕುಡಗೋಲು ಹಿಡಿದು ಆಕೆಯ ಹಿಂದೆಯೇ ತೆರಳಿ, ಕತ್ತಿನ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಕಲ್ಲವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ರಾಯಭಾಗ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪರಾರಿಯಾಗಲು ಯತ್ನಿಸುತ್ತಿದ್ದ ಸದಾಶಿವನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ರಾಯಭಾಗ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *