Breaking News

ನಿಂಗಿದು ಬೇಕಿತ್ತಾ ಮಗನೇ.. ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ!

ದೊಡ್ಡಬಳ್ಳಾಪುರ: ಮದ್ಯದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳು ಜಗಳವಾಡುತ್ತಿದ್ದಾಗ, ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ ಘಟನೆ ಪಾಲಜೋಗಹಳ್ಳಿಯಲ್ಲಿ ನಡೆದಿದೆ. ಮಣಿಕಂಠ ಮತ್ತು ರಾಯಪ್ಪ ಪೂಜಾರಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹರಹಾನ್ ಸಾರಿಹಾನ್ ಮತ್ತು ಬಸೀರ ಅಲಿಯಾಸ್ ಗಿಡ್ಡ ಎಂಬವರು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಬಗ್ಗೆ 112ಗೆ ಕರೆ ಬಂದಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು ಜಗಳ ಬಿಡಿಸಲು ಮುಂದಾದಾಗ ಆರೋಪಿಗಳು ಅವರ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಪೊಲೀಸರ ಎದೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಘಟನೆ ಬಳಿಕ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *