ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಶಂಕರ್‌ನನ್ನು ಅಕ್ರಮವಾಗಿ ಬಿಡುಗಡೆ ಮಾಡಿದ ಪ್ರಕರಣದಲ್ಲಿ ಬಂಧನವಾಗಿರುವ ಜೈಲು ಡಿಐಜಿ ಸೋಮಶೇಖರ್ ಅವರನ್ನು ನ್ಯಾಯಾಲಯ ಅಕ್ಟೋಬರ್ 9ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರ ತನಿಖೆಯಲ್ಲಿ, ಕೈದಿ ಶಂಕರ್‌ನ ಪತ್ನಿಯೊಂದಿಗೆ ಡಿಐಜಿ ಸೋಮಶೇಖರ್ ಹಾಗೂ ಸಿಬ್ಬಂದಿ ಶ್ರೀಕಾಂತ್ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಆಕೆಯ ಮೂಲಕ ಕೈದಿಯನ್ನು ಬಿಡುಗಡೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2001ರ ಅಪಹರಣ-ಸುಲಿಗೆ ಪ್ರಕರಣದಲ್ಲಿ ಶಂಕರ್‌ಗೆ ಜೀವಾವಧಿ ಶಿಕ್ಷೆಯಾಗಿತ್ತು. 2018ರಲ್ಲಿ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ದಾಖಲೆ ನೀಡಿ ಆತನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಎಂಟು ವರ್ಷಗಳ ಬಳಿಕ ಬಂದ ಅನಾಮಧೇಯ ದೂರಿನ ಆಧಾರದ ಮೇಲೆ ತನಿಖೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದ್ದು, ಶಂಕರ್, ಶ್ರೀಕಾಂತ್ ಬಳಿಕ ಡಿಐಜಿ ಸೋಮಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

