Breaking News

ವ್ಯಕ್ತಿ ಭೀಕರ ಕೊಲೆ, ಮಾರಕಾಸ್ತ್ರಗಳಿಂದ ದಾಳಿ; 6 ಮಂದಿ ಗ್ಯಾಂಗ್ ನಿಂದ ಕೃತ್ಯ!

ಮೈಸೂರು: ನಗರದ ಗೋಕುಲಂನಲ್ಲಿ ಜನರ ಗುಂಪೊಂದು ಮಹೇಶ್ ಟಿ. (40) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಿಳೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಸಾರ್ವಜನಿಕರ ಎದುರೇ ಮಹೇಶ್ ಮೇಲೆ ದಾಳಿ ನಡೆಸಿ ಹಂತಕರು ಪರಾರಿಯಾಗಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ವಿ.ವಿ. ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ವಿಚಾರವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *