ಕಲಬುರಗಿ: ನಗರದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಸ್ಟಿಕ್ ರಾಡ್‌ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರನ್ನು ಬ್ರಹ್ಮಪುರದ ಕನಕನಗರ ನಿವಾಸಿ ಹಾಗೂ ಹೋಟೆಲ್ ಉದ್ಯಮಿ ಸಿದ್ದಲಿಂಗ ಸಾವಳಗಿ (35) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಸಿದ್ದಲಿಂಗ ನಾಪತ್ತೆಯಾಗಿದ್ದರು. ಭಾನುವಾರ ಸಂಜೆ ನಗರದ ಹೊರವಲಯದ ಹೋಟೆಲ್‌ವೊಂದರ ಬಳಿ ಕಾರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಸ್ನೇಹಿತರೇ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಬ್ ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

