ಯಾದಗಿರಿ: ಪತಿ ಹಾಗೂ ಆತನ ಕುಟುಂಬಸ್ಥರಿಂದ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ 21 ವರ್ಷದ ಕವಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ತಾಲೂಕಿನ ಏವೂರು ಸಣ್ಣ ತಾಂಡಾದಲ್ಲಿ ನಡೆದಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಸುನೀಲ್ ಜಾಧವ್ ಅವರನ್ನು ಪ್ರೀತಿಸಿ ವಿವಾಹವಾಗಿದ್ದ ಕವಿತಾಗೆ ತವರು ಮನೆಯವರೊಂದಿಗೆ ಮಾತನಾಡದಂತೆ ಹಾಗೂ ಭೇಟಿಯಾಗದಂತೆ ಪತಿ ಕುಟುಂಬದವರು ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ನಿರಂತರ ಕಿರುಕುಳದಿಂದ ಮನನೊಂದಿದ್ದ ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಕವಿತಾ ಕೈ ಹಾಗೂ ಬೆರಳುಗಳ ಮೇಲೆ ತಂದೆ-ತಾಯಿಯನ್ನು ಉದ್ದೇಶಿಸಿ ಕೆಲವು ಬರಹಗಳನ್ನು ಬರೆದಿದ್ದರು ಎನ್ನಲಾಗಿದ್ದು, ಪೊಲೀಸರು ಇದನ್ನು ಪರಿಶೀಲಿಸುತ್ತಿದ್ದಾರೆ. ಕವಿತಾ ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪತಿ ಸುನೀಲ್ ಜಾಧವ್ ಸೇರಿದಂತೆ ಎಂಟು ಮಂದಿ ವಿರುದ್ಧ ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು, ಕಿರುಕುಳದ ಆರೋಪದ ಸತ್ಯಾಸತ್ಯತೆ ಹಾಗೂ ಸಾವಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

