ಬೆಂಗಳೂರು: ಅಮೃತಹಳ್ಳಿಯಲ್ಲಿ ನಡೆದ ಜಿಮ್ ಟ್ರೈನರ್ ನಂದನ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪೊಲೀಸರಿಗೆ ಹಲವು ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಕೊಲೆಗೂ ಮುನ್ನ ನಂದನ್ ಜೊತೆ ಆರೋಪಿಗಳು ಅನುಚಿತವಾಗಿ ವರ್ತಿಸಿರುವ ಶಂಕೆ ವ್ಯಕ್ತವಾಗಿದೆ. ನಂದನ್ ದೇಹದ ಮೇಲೆ ಕಚ್ಚಿದ ಗುರುತುಗಳು ಪತ್ತೆಯಾಗಿದ್ದು, ಈ ವಿಚಾರ ತನಿಖೆಯಲ್ಲಿ ಮಹತ್ವ ಪಡೆದಿದೆ. ಅನುಚಿತ ವರ್ತನೆಯನ್ನು ನಂದನ್ ವಿರೋಧಿಸಿದಾಗ ಪ್ರಮುಖ ಆರೋಪಿ ವಿಶ್ವನಾಥ್ ಜೊತೆ ತೀವ್ರ ಗಲಾಟೆ ನಡೆದಿದ್ದು, ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡಿದೆ ಎನ್ನಲಾಗಿದೆ. ಆರೋಪಿಗಳನ್ನು ಬಂಧಿಸುವ ವೇಳೆ ಅವರು ನಶೆಯಲ್ಲಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ನಶೆ ಇಳಿದ ನಂತರ ವಿಚಾರಣೆ ನಡೆಸಿದಾಗ ಆರೋಪಿಗಳು ಘಟನೆಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ಅಮೃತಹಳ್ಳಿ ಪೊಲೀಸರು ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

