ಕೋಲಾರ: ಸಾಲಗಾರರ ಕಿರುಕುಳ ಹಾಗೂ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಳ್ಳತನಕ್ಕಿಳಿದಿದ್ದ ಮೈಸೂರು ಮೂಲದ ಇಬ್ಬರು ಸ್ನೇಹಿತರು ಬಳಿಕ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸೈಯದ್ ಸಲ್ಮಾನ್ ಅಲಿಯಾಸ್ ಪೈಲ್ವಾನ್ ಹಾಗೂ ಮತ್ತೊಬ್ಬ ಆರೋಪಿ ಹೆಲ್ಮೆಟ್, ಮಾಸ್ಕ್ ಧರಿಸಿ ಅಂಗಡಿ, ಬೇಕರಿಗಳಲ್ಲಿ ಕಳ್ಳತನ ಮಾಡುತ್ತಿದ್ದರು. ಹಗಲು ಅಂಗಡಿಗಳ ಮೇಲೆ ನಿಗಾ ಇಟ್ಟು, ರಾತ್ರಿ ಷಟರ್ ಬೀಗ ಮುರಿದು ಹಣ ಕದಿಯುತ್ತಿದ್ದರು. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಇವರ ವಿರುದ್ಧ 14 ಪ್ರಕರಣಗಳು ದಾಖಲಾಗಿವೆ. ಕೋಲಾರದ ನಂದಿನಿ ಮಿಲ್ಕ್ ಪಾರ್ಲರ್‌ನಿಂದ ₹30 ಸಾವಿರ ಕದ್ದ ಪ್ರಕರಣವೂ ಇದರಲ್ಲಿ ಸೇರಿದೆ. ಕೋಲಾರ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಸೈಯದ್ ಸಲ್ಮಾನ್‌ನನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯ ಹಾಗೂ ಬೈಕ್ ಸಂಖ್ಯೆಯ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

