Breaking News

ಹುಬ್ಬಳ್ಳಿಯಲ್ಲಿ ಕಳ್ಳರು ಬಾಲ ಬಿಚ್ಚಿದ್ರಾ..? ರಾತ್ರಿ 2 ಗಂಟೆಗೆ ಮನೆಗೆ ಕನ್ನ!ಹಳೇ ಹುಬ್ಬಳ್ಳಿಯಲ್ಲಿ ಮತ್ತೆ ಕಳ್ಳರ ಹಾವಳಿ..! ಬೀಗ ಮುರಿದು ಮನೆಗೆ ನುಗ್ಗಿದ ಖದೀಮರು

ಹಳೇ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ..! ರಾತ್ರಿ ಮನೆ ಬೀಗ ಮುರಿದು ಕಳ್ಳತನ – ಸ್ಥಳಕ್ಕೆ ದೌಡಾಯಿಸಿದ ಪೊಲೀಸರು..

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಪಾರಿ ಪ್ಲಾಟ್, ಶಿವಶಂಕರ ಕಾಲೋನಿಯ 6ನೇ ಕ್ರಾಸ್‌ನಲ್ಲಿ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ…

ಅಬ್ದುಲ್ ಹಮೀದ್ ಬಳಾರಿ ಎಂಬುವವರ ಮನೆಯಲ್ಲಿ ರಾತ್ರಿ ಕಳ್ಳರು ಬೀಗ ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ….

ಕಳ್ಳತನವಾಗಿರುವ ವಸ್ತುಗಳು ಹಾಗೂ ಹಣದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಳೇ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಮತ್ತೆ ಕಳ್ಳರ ಕೈಚಳಕ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ…

Share News

About Shaikh BigTv

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *