ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ₹1 ಕೋಟಿ ಮೌಲ್ಯಕ್ಕೆ ಹಾವನ್ನು ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯಿಂದ ಜೀವಂತ ಹಾವು ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 970 ಸಾಫ್ಟ್ ಕೋರಲ್ ಸೀ ಫ್ಯಾನ್‌ಗಳು ಹಾಗೂ ಮೂರು ಮೊಬೈಲ್‌ಗಳನ್ನು ಜಪ್ತಿ ಮಾಡಿ ಆರು ಮಂದಿಯನ್ನು ಬಂಧಿಸಲಾಗಿದೆ. ಮೂಢನಂಬಿಕೆ ಹಾಗೂ ಅಪರೂಪದ ಜೀವಿಗಳ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಆರೋಪಿಗಳು ಅಕ್ರಮ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಇಂತಹ ಅಪರೂಪದ ಜೀವಿಗಳನ್ನು ಹಿಡಿಯುವುದು, ಇಟ್ಟುಕೊಳ್ಳುವುದು ಅಥವಾ ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಬಂಧಿತ ಆರೋಪಿಗಳ ಹಿಂದೆ ಮತ್ತಷ್ಟು ಜಾಲವಿದೆಯೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
