Breaking News

ಹಾಸನದಲ್ಲಿ ಚಿನ್ನಾಭರಣಕ್ಕಾಗಿ ವೃದ್ಧೆಯ ಭೀಕರ ಕೊಲೆ; ಪ್ಲಾಸ್ಟಿಕ್ ಚೀಲದಲ್ಲಿ ಶವ ಪತ್ತೆ!

ಹಾಸನ: ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ವೃದ್ಧೆಯ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಎಂದು ಗುರುತಿಸಲಾಗಿದೆ. ಅಕ್ಟೋಬರ್ 3ರಂದು ವಿಜಿ ಕೊಪ್ಪಲಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಲಕ್ಷ್ಮಮ್ಮ ಬಳಿಕ ನಾಪತ್ತೆಯಾಗಿದ್ದರು. ಅಕ್ಟೋಬರ್ 6ರಂದು ಪತಿ ಅಣ್ಣೇಗೌಡರು ಪೊಲೀಸರಿಗೆ ದೂರು ನೀಡಿದ ಬಳಿಕ ಶೋಧ ನಡೆಸಿದಾಗ ನಾಲೆಯಲ್ಲಿ ಶವ ಪತ್ತೆಯಾಗಿದೆ. ಚಿನ್ನಾಭರಣ ದೋಚುವ ಉದ್ದೇಶದಿಂದ ಕೊಲೆ ಮಾಡಿ, ಶವವನ್ನು ಚೀಲದಲ್ಲಿ ಕಟ್ಟಿ ನಾಲೆಗೆ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಎಸ್‌ಪಿ ಶುಭನ್ವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿಯೊದಿಗೆ ನಿರಂತರ ಸಂಪರ್ಕ: ಕಾನ್ಸ್‌ಟೇಬಲ್‌ ಸಸ್ಪೆಂಡ್

ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿಯೊಂದಿಗೆ ನಿರಂತರ ಸಂಪರ್ಕ ಹೊಂದಿ, ಪೊಲೀಸ್ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದ ಆರೋಪದ ಮೇಲೆ …

Leave a Reply

Your email address will not be published. Required fields are marked *