ಶಿಗ್ಗಾವಿ ತಾಲ್ಲೂಕಿನ ದುಂಡಶಿ ವಲಯದ ಹೊಸೂರ ಗ್ರಾಮದಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸಲು ಯತ್ನಿಸಿದ ಪ್ರಕರಣವನ್ನು ಅರಣ್ಯ ಇಲಾಖೆ ಪತ್ತೆಹಚ್ಚಿದೆ. ಕಾರ್ಯಾಚರಣೆಯಲ್ಲಿ 5.255 ಘನ ಮೀಟರ್ ಮರದ ದಿಮ್ಮಿಗಳು, ಎರಡು ಕೊಡಲಿಗಳು ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಮರದಲ್ಲಿ ಏಳು ಸಾಗುವಾನಿ ಬೊಲೆಗಳು, ನಾಲ್ಕು ಸಾಗುವಾನಿ ಗೋಲ ತುಂಡುಗಳು ಹಾಗೂ 22 ಮಿಶ್ರ ಗೋಲ ತುಂಡುಗಳು ಸೇರಿವೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅರಣ್ಯ ಸಂಪತ್ತಿನ ಅಕ್ರಮ ಕಡಿತ ಮತ್ತು ಸಾಗಾಟ ತಡೆಯಲು ಮುಂದಿನ ದಿನಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಎಚ್ಚರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

