Breaking News

ಬೆಂಗಳೂರಿನ 8ನೇ ಮೈಲಿಯಲ್ಲಿ KSRTC ಬಸ್ ಚಾಲಕರ ಕಳ್ಳಾಟ ಬಯಲು: ಕಾದು ಕಾದು ಸುಸ್ತಾಗಿ ಬಸ್ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆ

ಬೆಂಗಳೂರು: ನಗರದ ಹೊರವಲಯದ 8ನೇ ಮೈಲಿ ಸಿಗ್ನಲ್ ಬಳಿ ಸಂಜೆ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗಳು ಸ್ಥಳೀಯ ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಮಾತ್ರ ಆದ್ಯತೆ ನೀಡುತ್ತಿವೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು, ಸಿರಾ, ಹಿರಿಯೂರು ಹಾಗೂ ಚಿತ್ರದುರ್ಗಕ್ಕೆ ತೆರಳುವ ಪ್ರಯಾಣಿಕರು ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಸುಮಾರು ಎರಡೂವರೆ ಗಂಟೆ ಕಾಯುತ್ತಿದ್ದ ಮಹಿಳೆಯೊಬ್ಬರು ಬಸ್‌ ನಿಲ್ಲಿಸದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಅವರನ್ನು ಬಸ್‌ಗೆ ಹತ್ತಿಸಿಕೊಳ್ಳಲಾಗಿದೆ. ಪ್ರತಿದಿನ ಸಂಜೆ ಇದೇ ಸಮಸ್ಯೆ ಎದುರಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದ್ದು, 8ನೇ ಮೈಲಿ ಬಳಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸ್ಥಳೀಯರನ್ನು ಹತ್ತಿಸಿಕೊಳ್ಳದ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Share News

About BigTv News

Check Also

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿಯೊದಿಗೆ ನಿರಂತರ ಸಂಪರ್ಕ: ಕಾನ್ಸ್‌ಟೇಬಲ್‌ ಸಸ್ಪೆಂಡ್

ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿಯೊಂದಿಗೆ ನಿರಂತರ ಸಂಪರ್ಕ ಹೊಂದಿ, ಪೊಲೀಸ್ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದ ಆರೋಪದ ಮೇಲೆ …

Leave a Reply

Your email address will not be published. Required fields are marked *