ದಾವಣಗೆರೆ: ವರದಕ್ಷಿಣೆ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿ, 26 ವರ್ಷದ ವಿನುತಾ ಮೃತಪಟ್ಟ ಪ್ರಕರಣ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಹರಿಹರ ತಾಲೂಕಿನ ಕಡ್ಲೆಗೊಂದಿ ಗ್ರಾಮದ ವಿನುತಾ ಅವರ ಕುಟುಂಬಸ್ಥರು ನ್ಯಾಯಕ್ಕಾಗಿ ಎಸ್‌ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಐದು ವರ್ಷಗಳ ಹಿಂದೆ ಶಿವಶಂಕರ್ ಜೊತೆ ವಿವಾಹವಾಗಿದ್ದ ವಿನುತಾಗೆ ಮಕ್ಕಳಾಗಿರಲಿಲ್ಲ. ಈ ವಿಚಾರವಾಗಿ ಪತಿ ಹಾಗೂ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ತವರು ಮನೆಯಿಂದ ಮರಳಿದ ಬಳಿಕ ವಿನುತಾ ನೇಣು ಹಾಕಿಕೊಂಡಿದ್ದಾಳೆ ಎಂದು ಗಂಡನ ಮನೆಯವರು ತಿಳಿಸಿದ್ದಾರೆ. ವಿನುತಾಳನ್ನು ಆಸ್ಪತ್ರೆಗೆ ಕರೆತಂದಾಗ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆ ಬಳಿಕ ಪತಿ ಶಿವಶಂಕರ್, ಮಾವ ಈಶ್ವರಪ್ಪ ಹಾಗೂ ಅತ್ತೆ ಶಾಂತಮ್ಮ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
