ಬಳ್ಳಾರಿ: ನಕಲಿ ಜಾತಿ ಪ್ರಮಾಣಪತ್ರ ಸೃಷ್ಟಿಸಿ ಸರ್ಕಾರದ ಅನುದಾನವನ್ನು ಅಕ್ರಮವಾಗಿ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಿಲ್ಲಾ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ಒಟ್ಟು ₹25,000 ದಂಡ ವಿಧಿಸಿದೆ. ಬಿ. ಗೀತಾ ಅಲಿಯಾಸ್ ಗೀತಮ್ಮ ಶಿಕ್ಷೆಗೆ ಗುರಿಯಾದವರು. ಪರಿಶಿಷ್ಟ ಪಂಗಡಕ್ಕೆ ಸೇರದಿದ್ದರೂ ನಕಲಿ ಪ್ರಮಾಣಪತ್ರ ಪಡೆದಿದ್ದ ಆರೋಪದ ಮೇಲೆ ಬ್ರೂಸ್‌ಪೇಟೆ ಠಾಣೆಯಲ್ಲಿ 2020ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಭಾ.ದಂ.ಸಂ. ಕಲಂ 198ರಡಿ 2 ವರ್ಷ ಸರಳ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ 1 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ಪ್ರಕರಣದ ಮತ್ತಿಬ್ಬರು ಆರೋಪಿಗಳ ವಿರುದ್ಧ ಸಾಕ್ಷ್ಯ ಸಾಬೀತಾಗದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
