ಮಂಗಳೂರು: ಸಿಬಿಐ ಹಾಗೂ ಮುಂಬೈ ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಸೈಬರ್ ವಂಚಕರು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ಬೆದರಿಸಿ ₹2 ಕೋಟಿ ವಂಚಿಸಿದ್ದಾರೆ. ಮನಿ ಲಾಂಡರಿಂಗ್ ಸೇರಿದಂತೆ ಗಂಭೀರ ಅಪರಾಧಗಳಲ್ಲಿ ತಮ್ಮ ಹೆಸರು ಕೇಳಿಬಂದಿದೆ ಎಂದು ಸುಳ್ಳು ಹೇಳಿ ಮಹಿಳೆಯನ್ನು ಭಯಪಡಿಸಿದ್ದರು. ಬಳಿಕ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡ ವಂಚಕ ವಿಡಿಯೋ ಕಾಲ್ ಮಾಡಿ, ಯಾರಿಗೂ ಮಾಹಿತಿ ನೀಡದಂತೆ ಸೂಚಿಸಿದ್ದ. ಬ್ಯಾಂಕ್ ಹಾಗೂ ಆಸ್ತಿ ವಿವರ ಪಡೆದು ಪರಿಶೀಲನೆಗಾಗಿ ಹಣ ವರ್ಗಾಯಿಸುವಂತೆ ತಿಳಿಸಿದ್ದು, ಮಹಿಳೆ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಹಣ ಪಡೆದ ಬಳಿಕ ವಂಚಕರು ಸಂಪರ್ಕ ಕಡಿತಗೊಳಿಸಿದ್ದು, ತಾನು ವಂಚನೆಗೆ ಒಳಗಾಗಿರುವುದು ಮಹಿಳೆಗೆ ತಿಳಿದುಬಂದಿದೆ. ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ. ವಂಚನೆಗೊಳಗಾದವರು ತಕ್ಷಣ 1930ಕ್ಕೆ ಕರೆ ಮಾಡುವಂತೆ ಪೊಲೀಸರು ಎಚ್ಚರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

