ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ 5.20ರ ಸುಮಾರಿಗೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನಡೆಸಿದರೂ ಫಲಕಾರಿಯಾಗಲಿಲ್ಲ. ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ.
ನಾನಾ ಪಾಟೇಕರ್ ಅವರು 2010ರಲ್ಲಿ ಬಿಡುಗಡೆಯಾದ ಕನ್ನಡದ ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು. ಚಿತ್ರದಲ್ಲಿ ಯೋಗರಾಜ್ ಪುಲಕೇಶಿ ಎಂಬ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ, ನಾಯಕನ ತಂದೆಯಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
ವಿಶೇಷವೆಂದರೆ, ‘ಯಕ್ಷ’ ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ನಾನಾ ಪಾಟೇಕರ್ ಸ್ವತಃ ಕನ್ನಡದಲ್ಲೇ ಡಬ್ ಮಾಡಿದ್ದರು. ಅಲ್ಲದೆ ಹುಲಿವೇಷದಂತಹ ಜನಪದ ಕಲೆಯಲ್ಲೂ ಹೆಜ್ಜೆ ಹಾಕಿ ಮೆಚ್ಚುಗೆ ಪಡೆದಿದ್ದರು. ಭಾಷೆ ಮತ್ತು ಗಡಿಗಳನ್ನೂ ಮೀರಿ ತಮ್ಮ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

