Breaking News

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ CCB ದಾಳಿ! ಬಾಡಿಗೆ ಮನೆಯೊಳಗೆ ನಡೆಯುತ್ತಿತ್ತು ಅಕ್ರಮ ದಂಧೆ

ಬೆಂಗಳೂರು: ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿಯ ಮಹಿಳಾ ಸಂರಕ್ಷಣಾ ವಿಭಾಗದ ಪೊಲೀಸರು ಮಹದೇವಪುರ ಠಾಣಾ ವ್ಯಾಪ್ತಿಯ ಸರಸ್ವತಿ ನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಕುಟುಂಬದೊಂದಿಗೆ ವಾಸಿಸುವುದಾಗಿ ಹೇಳಿ ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ಅನುಪಮಾ ಎಂಬ ಮಹಿಳೆ ಅಕ್ರಮ ಚಟುವಟಿಕೆ ನಡೆಸುತ್ತಿದ್ದಳು ಎನ್ನಲಾಗಿದೆ. ಪರಿಚಯಸ್ಥರ ಮೂಲಕ ಗ್ರಾಹಕರ ಮೊಬೈಲ್ ಸಂಖ್ಯೆಗಳು ಪಡೆದು ಸಂಪರ್ಕಿಸಿ, ಮಹಿಳೆಯರನ್ನು ಮನೆಗೆ ಕರೆಸಿಕೊಳ್ಳಲಾಗುತ್ತಿತ್ತು ಎಂಬ ಆರೋಪವಿದೆ. ದಾಳಿ ವೇಳೆ ವೇಶ್ಯಾವಾಟಿಕೆಗಾಗಿ ಮಹಿಳೆಯರನ್ನು ಮನೆಯಲ್ಲಿ ಇರಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯರನ್ನು ಹೇಗೆ ಕರೆತರಲಾಗಿತ್ತು ಹಾಗೂ ಪ್ರಕರಣದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಮಹಿಳೆಯರ ಮೇಲೆ ಬಲವಂತ ಅಥವಾ ಶೋಷಣೆ ನಡೆದಿದೆಯೇ ಎಂಬ ಅಂಶವನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *