Breaking News

ಆನ್ ಲೈನ್ ಗೇಮ್ ಗೀಳಿಗೆ ಬಿದ್ದ ಸ್ನೇಹಿತರಿಂದ ಟಾರ್ಚರ್: ನೊಂದ ಬಾಲಕ ಆತ್ಮಹತ್ಯೆ

ದಾವಣಗೆರೆ: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ಸ್ನೇಹಿತರು ಹಣ ನೀಡುವಂತೆ ಪೀಡಿಸಿದ್ದರಿಂದ ಬೇಸತ್ತು 13 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ. ಮನೋಜ್ ಟಿ.ಆರ್. (13) ಮೃತಪಟ್ಟ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್‌ಗೆ ಹಣ ಹಾಕುವಂತೆ ಮನೋಜ್‌ಗೆ ಒತ್ತಾಯಿಸಿ, ಹಣ ತರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ಸ್ನೇಹಿತರ ಒತ್ತಾಯದ ಮೇರೆಗೆ ಮನೋಜ್ ಮನೆಯಿಂದ ಸುಮಾರು ₹4 ಲಕ್ಷ ಹಣ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ. ಹಣಕ್ಕಾಗಿ ಆತನ ಮೇಲೆ ಹಲ್ಲೆಯೂ ನಡೆಸಿದ್ದರು ಎಂದು ಪೋಷಕರು ತಿಳಿಸಿದ್ದಾರೆ. ಮನೆಯಲ್ಲಿ ಹಣದ ವ್ಯತ್ಯಾಸ ಕಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರು ಬಾಲಕರ ಪಾತ್ರ ಸೇರಿದಂತೆ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *