Breaking News

ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಪುಂಡಾಟ: ಬಸ್ ಟಚ್ ಆಗಿದ್ದಕ್ಕೆ KSRTC ಚಾಲಕನ ಮೇಲೆ ಹಲ್ಲೆ

ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಟಚ್ ಆಯಿತು ಎಂಬ ಕಾರಣಕ್ಕೆ ಬೈಕ್ ಸವಾರನೊಬ್ಬ ಬಸ್ ಚಾಲಕನನ್ನು ನಡುರಸ್ತೆಯಲ್ಲೇ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾನೆ. ಬಳಿಕ ಹೆಲ್ಮೆಟ್‌ನಿಂದ ಬಸ್ ಗಾಜಿಗೆ ಹೊಡೆದು ಹಾನಿ ಮಾಡಲು ಯತ್ನಿಸಿ, ಚಾಲಕನ ಮೇಲೂ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ಕೆಲ ಯುವಕರನ್ನು ಕರೆಸಿ ಹಲ್ಲೆ ಮುಂದುವರಿಸಿದ ಆರೋಪವೂ ಕೇಳಿಬಂದಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆಯ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *