Breaking News

ಪಾರ್ಕ್‌ನಲ್ಲಿ ಕುಳಿತಿದ್ದವರ ಮೇಲೆ ಹಲ್ಲೆ: ಯುವತಿಗೆ ಗಾಯ

ಬೆಂಗಳೂರು: ಪಾರ್ಕ್‌ನಲ್ಲಿ ಕುಳಿತಿದ್ದ ವಿಚಾರಕ್ಕೆ ಯುವಕ-ಯುವತಿ ಹಾಗೂ ಅಪರಿಚಿತ ವ್ಯಕ್ತಿಯ ನಡುವೆ ನಡೆದ ಜಗಳದಲ್ಲಿ ಯುವತಿ ಗಾಯಗೊಂಡ ಘಟನೆ ದೊಮ್ಮಲೂರಿನ ಕನಕದಾಸ ಪಾರ್ಕ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕೇರಳ ಮೂಲದ, ನಗರದಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ವ್ಯಾಸಂಗ ಮಾಡುತ್ತಿದ್ದ ಅನಿಮಾ (22) ಗಾಯಗೊಂಡ ಯುವತಿ. ಅನಿಮಾ ಸ್ನೇಹಿತನೊಂದಿಗೆ ಪಾರ್ಕ್‌ನಲ್ಲಿ ಕುಳಿತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ಮಾತಿನ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿ ಚಾಕುವಿನಿಂದ ಯುವಕನ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಸ್ನೇಹಿತನನ್ನು ರಕ್ಷಿಸಲು ಅನಿಮಾ ಮಧ್ಯಪ್ರವೇಶಿಸಿದಾಗ ಚಾಕು ಆಕೆಯ ತುಟಿಗೆ ತಾಗಿ ಗಾಯವಾಗಿದೆ. ಘಟನೆ ಬಳಿಕ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *