ವಿಜಯಪುರ: ಮತದಾರರ ಪಟ್ಟಿಯ ಎಸ್‌ಐಆರ್ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೀವಂತ ವ್ಯಕ್ತಿಗಳನ್ನು ಮೃತಪಟ್ಟಿದ್ದಾರೆ ಎಂದು ತೋರಿಸಿ ದಾಖಲೆ ಸಲ್ಲಿಸಿದ ಆರೋಪದಡಿ ಅಬ್ದುಲ್ ರಜಾಕ್ ಬಾಗವಾನ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ವಿಜಯಪುರ ಕ್ಷೇತ್ರದ 1,054 ಮತದಾರರ ಹೆಸರುಗಳನ್ನು ಕೈಬಿಡುವಂತೆ ಯತ್ನಾಳ್ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದ್ದು, ಅದರಲ್ಲಿ 8 ಮುಸ್ಲಿಂ ಮತದಾರರು ಮೃತಪಟ್ಟಿದ್ದಾರೆ ಎಂದು ಮರಣ ಪ್ರಮಾಣಪತ್ರಗಳನ್ನು ಲಗತ್ತಿಸಲಾಗಿತ್ತು ಎಂಬ ಆರೋಪವಿದೆ. ಮನೆಮನೆ ಪರಿಶೀಲನೆ ವೇಳೆ ಮೃತಪಟ್ಟಿದ್ದಾರೆ ಎನ್ನಲಾದವರು ಜೀವಂತವಾಗಿರುವುದು ಪತ್ತೆಯಾಗಿತ್ತು. ಆರೋಪಗಳನ್ನು ಯತ್ನಾಳ್ ನಿರಾಕರಿಸಿದ್ದು, ಮತದಾರರು ಜೀವಂತವಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂದಿದ್ದಾರೆ. ಈ ನಡುವೆ ಎಸ್‌ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

