Breaking News

ಚಲಿಸುತ್ತಿದ್ದ ಸ್ಲೀಪರ್ ಬಸ್ ನಲ್ಲಿ ಭೀಕರ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ ಬಸ್

ಶಿವಮೊಗ್ಗ: ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಆನಂದಪುರ ಬಳಿಯ ಮುಂಬಾಳು ಗ್ರಾಮದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಇಡೀ ಬಸ್ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಿದ್ದಾರೆ. ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದು, ಸಾಗರಕ್ಕೆ ಇಬ್ಬರು ಮಾತ್ರ ತೆರಳುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *