Breaking News

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ ದಾಳಿ ನಡೆಸಿದ್ದಾನೆ. ಸೆ.29ರಂದು ನಡೆದ ಘಟನೆಯಲ್ಲಿ ಯುವತಿ ಹಾಗೂ ಆರೋಪಿ ಚಂದನ್ (27) ಸುಟ್ಟ ಗಾಯಗೊಂಡಿದ್ದಾರೆ. ಚಂದನ್ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದು, ಆಕೆ ನಿರಾಕರಿಸಿದರೂ ಪದೇಪದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ರಾಜಿ ಪಂಚಾಯಿತಿ ನಡೆದಿದ್ದರೂ, ಮತ್ತೆ ಹಿಂಬಾಲಿಸಿ ಪ್ರೀತಿ ಹಾಗೂ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ನಿರಾಕರಿಸಿದಾಗ ಚಂದನ್ ತನ್ನನ್ನು ತಾನೇ ಬೆಂಕಿಗೆ ಒಡ್ಡಿಕೊಂಡು ಯುವತಿಯನ್ನೂ ಅಪಾಯಕ್ಕೆ ಸಿಲುಕಿಸಿದ್ದಾನೆ ಎನ್ನಲಾಗಿದೆ. ಚಂದನ್‌ಗೆ ಶೇ.50ರಷ್ಟು ಸುಟ್ಟ ಗಾಯಗಳಾಗಿದ್ದು, ಯುವತಿಗೂ ಗಾಯಗಳಾಗಿವೆ. ಯುವತಿಯ ದೂರಿನ ಆಧಾರದ ಮೇಲೆ ವಿಜಯನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಲಿಸುತ್ತಿದ್ದ ಸ್ಲೀಪರ್ ಬಸ್ ನಲ್ಲಿ ಭೀಕರ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ ಬಸ್

ಶಿವಮೊಗ್ಗ: ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಆನಂದಪುರ ಬಳಿಯ ಮುಂಬಾಳು ಗ್ರಾಮದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. …

Leave a Reply

Your email address will not be published. Required fields are marked *