Breaking News

ಮಗುವಿಗೆ ಜನ್ಮ ನೀಡಿದ ಅತ್ಯಾಚಾರಕ್ಕೊಳಗಾದ ಯುವತಿ; ಕೇಸು ದಾಖಲು

ಕಾಸರಗೋಡು: ಅತ್ಯಾಚಾರಕ್ಕೊಳಗಾದ 21 ವರ್ಷದ ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ 40 ವರ್ಷದ ಚಂದ್ರ ವಿರುದ್ಧ ಮಂಜೇಶ್ವರ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಭಯದಿಂದ ಯುವತಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎನ್ನಲಾಗಿದೆ. ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಡಿಎನ್‌ಎ ಪರೀಕ್ಷೆ ನಡೆಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಚಲಿಸುತ್ತಿದ್ದ ಸ್ಲೀಪರ್ ಬಸ್ ನಲ್ಲಿ ಭೀಕರ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ ಬಸ್

ಶಿವಮೊಗ್ಗ: ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಆನಂದಪುರ ಬಳಿಯ ಮುಂಬಾಳು ಗ್ರಾಮದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. …

Leave a Reply

Your email address will not be published. Required fields are marked *