Breaking News

ಲಾಭದಾಸೆ ತೋರಿಸಿ ವಂಚನೆ

ಧಾರವಾಡ: ಇನ್‌ಸ್ಟಾಗ್ರಾಮ್‌ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಜಾಹೀರಾತು ನಂಬಿದ ವ್ಯಕ್ತಿಯೊಬ್ಬರು ₹6.53 ಲಕ್ಷ ಕಳೆದುಕೊಂಡಿದ್ದಾರೆ. ಧಾರವಾಡದ ಮಹಾರಾಜ ಹುಲಗೂರ ವಂಚನೆಗೊಳಗಾದವರು. ಮೈಂತ್ರಾ ಡಿಜೈನ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಜಾಹೀರಾತು ನೋಡಿ ಸಂಪರ್ಕಿಸಿದ ಮಹಾರಾಜರಿಗೆ ಟೆಲಿಗ್ರಾಂ ಮೂಲಕ ಹೂಡಿಕೆ ಮಾಡುವಂತೆ ಸೂಚಿಸಲಾಗಿತ್ತು. ಬಳಿಕ ಅವರ ಹಾಗೂ ತಾಯಿಯ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹಣ ವಿತ್‌ಡ್ರಾ ಮಾಡಲು ಶೇ.20ರಷ್ಟು ತೆರಿಗೆ ಪಾವತಿಸುವಂತೆ ಹೇಳಿ, ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ಈ ಕುರಿತು ಮಹಾರಾಜ ಸಿಇಎನ್ ಕ್ರೈಂ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಚಲಿಸುತ್ತಿದ್ದ ಸ್ಲೀಪರ್ ಬಸ್ ನಲ್ಲಿ ಭೀಕರ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ ಬಸ್

ಶಿವಮೊಗ್ಗ: ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಆನಂದಪುರ ಬಳಿಯ ಮುಂಬಾಳು ಗ್ರಾಮದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. …

Leave a Reply

Your email address will not be published. Required fields are marked *