Breaking News

ಹು-ಧಾ ನಡುವೆ ದೇಶದ ಮೊದಲ ಐರೋಪ್ಯ ಮಾದರಿ ಟ್ರ್ಯಾಮ್? ಇನ್ಮುಂದೆ ಪ್ರಯಾಣ ಮತ್ತಷ್ಟು ಸೂಪರ್!

ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳ ನಡುವೆ ಆಧುನಿಕ ಟ್ರ್ಯಾಮ್ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ. ಈಗಿರುವ 23 ಕಿ.ಮೀ ಉದ್ದದ ಬಿಆರ್‌ಟಿಎಸ್‌ ಮಾರ್ಗದಲ್ಲೇ ಹಳಿ ಅಳವಡಿಸಿ ಟ್ರ್ಯಾಮ್‌ ಓಡಿಸುವ ಯೋಜನೆಯ ಕಾರ್ಯಸಾಧ್ಯತೆ ಅಧ್ಯಯನ ನಡೆಸಲಾಗುತ್ತಿದೆ. ವಿದ್ಯುತ್ ಚಾಲಿತ ಟ್ರ್ಯಾಮ್‌ಗಳು ಒಂದೇ ಬಾರಿಗೆ ಹೆಚ್ಚಿನ ಪ್ರಯಾಣಿಕರನ್ನು ಸಾಗಿಸಲಿದ್ದು, ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲಿವೆ. ಮೆಟ್ರೋಗೆ ಹೋಲಿಸಿದರೆ ಟಿಕೆಟ್ ದರ ಮತ್ತು ನಿರ್ವಹಣಾ ವೆಚ್ಚವೂ ಕಡಿಮೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಫ್ರಾನ್ಸ್‌, ಜರ್ಮನಿ ಸೇರಿದಂತೆ ಹಲವು ಯುರೋಪಿಯನ್ ದೇಶಗಳಲ್ಲಿ ಆಧುನಿಕ ಟ್ರ್ಯಾಮ್ ವ್ಯವಸ್ಥೆ ಜಾರಿಯಲ್ಲಿದೆ. ಯೋಜನೆ ಕಾರ್ಯಸಾಧು ಎಂದು ಅಧ್ಯಯನ ವರದಿ ತಿಳಿಸಿದರೆ, ಆಧುನಿಕ ಟ್ರ್ಯಾಮ್ ಹೊಂದಿರುವ ದೇಶದ ಮೊದಲ ನಗರಗಳೆಂಬ ಹೆಗ್ಗಳಿಕೆ ಹುಬ್ಬಳ್ಳಿ–ಧಾರವಾಡಕ್ಕೆ ಸಿಗುವ ಸಾಧ್ಯತೆಯಿದೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *