Breaking News

ಸಂಕೇಶ್ವರ ಹೆದ್ದಾರಿ 48ರ ಮೇಲೆ ಗಂಗಾವತಿ-ಕೊಲ್ಲಾಪುರ ಸಾರಿಗೆ ಬಸ್ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ದುರ್ಮರಣ!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಾವತಿಯಿಂದ ಕೊಲ್ಲಾಪುರಕ್ಕೆ ತೆರಳುತ್ತಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಬಸ್ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಮೃತ ಚಾಲಕ ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಂಕೇಶ್ವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *